ಪಾಠ ಹೇಳಿಕೊಡುವ ಟೀಚರನ್ನು ಕಾಡಿಗೆ ಕರೆದುಕೊಂಡು ಹೋಗಿ, ಎ.ತ್ತಿಎತ್ತಿ ಮುತ್ತಿಟ್ಟ ಸ್ಟೂಡೆಂಟ್
ಶಾಲೆ, ಕಾಲೇಜುಗಳಲ್ಲಿ ಡಿಸೆಂಬರ್ ತಿಂಗಳು ಆರಂಭವಾಯಿತೆಂದರೆ ಶೈಕ್ಷಣಿಕ ಪ್ರವಾಸ ಹೋಗುವುದು ಸಾಮಾನ್ಯ. ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಕೂಡ ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದಾರೆ. ಈ ವೇಳೆ ಮುಖ್ಯ ಶಿಕ್ಷಕಿ ಪ್ರೌಢಶಾಲಾ ವಿದ್ಯಾರ್ಥಿಯ ಜೊತೆಗೆ ಖುಲ್ಲಂ, ಖುಲ್ಲಾ ರೊಮ್ಯಾನ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣಕ್ಕೂ ಹಂಚಿಕೊಂಡಿದ್ದಾರೆ.
ಈ ಫೋಟೋ ನೋಡಿದ ಗ್ರಾಮಸ್ಥರು ಮುಖ್ಯ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ ಅಸಭ್ಯವಾಗಿ ವರ್ತಿಸಿದ ಪ್ರಭಾರಿ ಮುಖ್ಯ ಶಿಕ್ಷಕಿ ಪುಷ್ಪಲತಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.ಶೈಕ್ಷಣಿಕ ಅಧ್ಯಯನ ಪ್ರವಾಸಕ್ಕೆ ತೆರಳಿದ್ದ ವೇಳೆ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ತನ್ನ ಮಗನ ವಯಸ್ಸಿನ ಅಪ್ರಾಪ್ತ ಬಾಲಕನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ.
ಇಷ್ಟೇ ಅಲ್ಲದೆ ಆತನೊಂದಿಗೆ ರೋಮ್ಯಾಂಟಿಕ್ ಆಗಿ ವರ್ತಿಸಿರೋ ವಿಡಿಯೋ ಹಾಗೂ ಚಿತ್ರಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ. ಇತ್ತೀಚೆಗೆ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಶಾಲಾ ಬಾಲಕನೊಂದಿಗೆ ಮುಖ್ಯ ಶಿಕ್ಷಕಿ ಈ ರೀತಿ ವರ್ತಿಸಿದ್ದು, ಇದೀಗ ಆ ಫೋಟೋಗಳು ಸೋರಿಕೆ ಆಗಿ ವಿದ್ಯಾರ್ಥಿ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.
ಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಲತಾ ಈ ರೀತಿ ತಾನೊಬ್ಬ ಗುರು ಎಂಬುದನ್ನು ಮರೆತು ಶಾಲೆಯ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾಳೆ. ಈ ವೇಳೆ ಬಾಲಕನೊಂದಿಗೆ ವಿವಿಧ ಭಂಗಿಗಳಲ್ಲಿ ಫೋಟೋ ತೆಗೆಸಿಕೊಂಡಿರುವ ಶಿಕ್ಷಕಿ, ವಿದ್ಯಾರ್ಥಿ ಕೂಡ ಶಿಕ್ಷಕಿಯರನ್ನು ಮುದ್ದಾಡಿದ್ದು, ಶಿಕ್ಷಕಿ ಕೂಡ ಬಾಲಕನಿಗೆ ಕಿಸ್ ಕೊಟ್ಟಿರುವ ಫೋಟೋಗಳು ಈಗ ಎಲ್ಲೆಡೆ ವೈರಲ್ ಆಗಿದೆ. ಶಿಕ್ಷಕಿ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಜತೆಗೆ ಶಿಕ್ಷಕಿಯ ವರ್ತನೆ ಬಗ್ಗೆ ಪೋಷಕರು ಕಿಡಿಕಾರಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿ ಪೋಷಕರು ಕೂಡ ಶಾಲೆ ಬಳಿ ತೆರಳಿ ಶಿಕ್ಷಕಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇನ್ನೂ ಘಟನೆಯ ಬಗ್ಗೆ ಶಾಲೆ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಗಮನಕ್ಕೆ ತಂದಿದ್ದು, ಕ್ರಮಕ್ಕೆ ಆಗ್ರಹಿಸಿದ್ದರು.
ಮುರುಗಮಲ್ಲ ಗ್ರಾಮದ ಜನರು ತಮ್ಮ ಮಕ್ಕಳೊಂದಿಗೆ ಮುಖ್ಯ ಶಿಕ್ಷಕಿ ನಡೆದುಕೊಂಡ ಅಭ್ಯ ವರ್ತನೆಯ ನಂತರ ಶಿಕ್ಷಣ ಇಲಾಖೆಗೆ ಪತ್ರ ಬರೆದು ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರೂ ಶಿಕ್ಷಣ ಇಲಾಖೆ ಮತ್ರ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ನಂತರ ಮಾಧ್ಯಮಗಳಲ್ಲಿ ಈ ವರದಿ ಬಂದ ನಂತರವೇ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.