ಇದು ಭಕ್ತಿ ಅಲ್ಲ, 'ಅಂಧ ರಾಮ ಭಕ್ತರು' ಎಂದು ಕಿ ಡಿಕಾರಿದ ಕಿಶೋರ್

 | 
ರ

ಶಂಕರಾಚಾರ್ಯರುಗಳನ್ನೂ ಹಿಂದೂ ವಿರೋಧಿಗಳು ದೇಶ ವಿರೋಧಿಗಳೆಂದು ಟ್ರೋಲ್ ಮಾಡುತ್ತಾರೆಯೇ ಎಂದು ಬಹುಭಾಷಾ ಚಿತ್ರನಟ ಕಿಶೋರ್ ಸವಾಲು ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಕಿಶೋರ್‌, ರಾಮ ಮಂದಿರದ ರಾಜಕೀಕರಣವನ್ನು ವಿರೋಧಿಸುತ್ತಿರುವ ಶಂಕರಾಚಾರ್ಯರುಗಳು ಹಿಂದೂ ವಿರೋಧಿಗಳಲ್ಲವೆಂದರೆ ನಿಜವಾದ ಹಿಂದೂ ವಿರೋಧಿಗಳು ಯಾರು ಎಂದು ಪ್ರಶ್ನಿಸಿದ್ದಾರೆ.

ಅಸಲಿ ಹಿಂದೂ ವಿರೋಧಿ ಯಾರು? ಧರ್ಮದ ರಾಜಕೀಕರಣವನ್ನು ವಿರೋಧಿಸುವವರನ್ನು ಹಿಂದೂ ವಿರೋಧಿಗಳು, ದೇಶ ವಿರೋಧಿಗಳೆಂದು ಟ್ರೋಲ್ ಮಾಡುವ ವಿಶ್ವಗುರು ಭಕ್ತರು ಮತ್ತು ತನ್ನ ವೃತ್ತಿಧರ್ಮಕ್ಕೆ ದ್ರೋಹ ಬಗೆದ ಗೋದಿ ಮಾಧ್ಯಮದವರು ಈಗೇನು ಮಾಡುತ್ತಾರೆ? ಎಂದು ಕೇಳಿದ್ದಾರೆ. ಅರ್ಧಂಬರ್ಧ ದೇವಸ್ಥಾನದ ಉದ್ಘಾಟನೆ ಮಾಡಿ ಓಟು ಬಾಚಲು ನಿಂತಿರುವ ಧೂರ್ತರು ಅವರ ಅಂಧಭಕ್ತರು ಹಿಂದೂ ವಿರೋಧಿಗಳೇ ಆಗುತ್ತಾರೆ.

ಅವರ ಧರ್ಮಾಂಧತೆಯ ಮಂಕುಬೂದಿಯ ಭ್ರಮೆಯಲ್ಲಿ ಮಂತ್ರಾಕ್ಷತೆ ಹಂಚುತ್ತಿರುವವರೂ ಅದೇ ಆಗಿಬಿಡುವುದಿಲ್ಲವೇ? ಈ ಅಯೋಗ್ಯ ರಾಜಕಾರಣಿಗಳಿಗೆ ರಾಮ ಬರೀ ರಾಜಕೀಯ ಲಾಭಕ್ಕಾಗಿಯೇ ಇರುವ ವ್ಯಾಪಾರದ ಸರಕು ಅಷ್ಟೇ ಎಂದು ಟೀಕಿಸಿದ್ದಾರೆ. ನಿಜವಾದ ದೈವವೆನ್ನುವ ನಂಬಿಕೆ ಇರುವುದು ಮಂದಿರ ಮಸೀದಿ ಚರ್ಚುಗಳಲ್ಲಲ್ಲ, ಗಾಂಧಿಯಂತೆ, ಜೀವನದ ಪ್ರತಿ ನಡೆಯಲ್ಲಿ ರಾಮ ಇರುತ್ತಾನೆ.

.ಪ್ರತಿ ನುಡಿಯಲ್ಲಿ ರಾಮ.ಸಾವಲ್ಲೂ ಹೇ ರಾಮ.. ಈ ಢೋಂಗಿಗಳಿಗೆ ಎಂದಾದರೂ ಅದು ಸಾಧ್ಯವೇ? ಎಷ್ಟೇ ಆಗಲಿ ಆ ಗಾಂಧಿಯನ್ನು ಕೊಂದವರಲ್ಲವೇ ಎಂದು ಕುಟುಕಿದ್ದಾರೆ. ನಟ ಕಿಶೋರ್ ತಮಗನ್ನಿಸಿದ್ದನ್ನು ಹೇಳುತ್ತಾರೆ. ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಪ್ರಾಯಗಳನ್ನು ಅವರು ತಿಳಿಸುತ್ತಾರೆ. ಇದೀಗ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ಕುರಿತಾಗಿ ಈ ರೀತಿ ಟೀಕೆ ಮಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.