ಸರ್ಕಾರದಲ್ಲಿ ಹಣವಿಲ್ಲ ಎಂದವರಿಗೆ ಈ‌ ಬಾರಿ ಸಂಪೂರ್ಣ ಹಣ ವರ್ಗಾವಣೆ ಮಾಡಿದ ಸ ರ್ಕಾರ

 | 
Jd

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಗೃಹಲಕ್ಷಿʼಗೆ ಇಂದಿಗೆ ಭರ್ತಿ ಒಂದು ವರ್ಷ. ಕಳೆದ ವರ್ಷ ನಡೆದ ವಿಧಾನಸಭೆಗೂ ಮುನ್ನ ಕಾಂಗ್ರೆಸ್‌ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಮಾಡುವುದಾಗಿ ಘೋಷಿಸಿತ್ತು. 

ಅದರಂತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್‌ ಸರ್ಕಾರವು ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿತ್ತು. ಇದುವರೆಗೆ ಬರೋಬ್ಬರಿ 25,000 ಕೋಟಿ ರೂ. ಹಣ ಗೃಹಲಕ್ಷ್ಮಿಯರ ʼಕೈʼ ಸೇರಿದೆ. ಇದರಿಂದ 1.25 ಕೋಟಿ ಗೃಹಲಕ್ಷ್ಮಿಯರು ಆರ್ಥಿಕ ಸ್ವಾವಲಂಬಿಗಳಾಗಿ ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದಾರೆ.

ಜೂನ್ ತಿಂಗಳ ಗೃಹಲಕ್ಷ್ಮಿ ಹಣವು ಫಲಾನುಭವಿಗಳ ಖಾತೆಗೆ ಸೇರಿದ್ದು, ಅನೇಕರಿಗೆ ಇನ್ನೂ ಹಣ ತಲುಪಿಲ್ಲ. ಇದಕ್ಕೆ ತೊಡಕಾಗಿದ್ದ ತಾಂತ್ರಿಕ ದೋಷವನ್ನು ಈಗಾಗಲೇ ಸರಿ ಮಾಡಿದ್ದೇವೆ. ಜುಲೈ ಮತ್ತು ಆಗಸ್ಟ್‌ ತಿಂಗಳ ಗೃಹಲಕ್ಷ್ಮಿ ಹಣದ ಬಗ್ಗೆ ಸಿಎಂ ಸಿದ್ದರಾಮಯ್ಯರೊಂದಿಗೆ ಚರ್ಚಿಸಿದ್ದೇವೆ. ಮುಂದಿನ ವಾರದೊಳಗೆ ಈ ಎರಡೂ ತಿಂಗಳ ಹಣ ಗೃಹಲಕ್ಷ್ಮಿಯರ ಖಾತೆಗೆ ಬರಲಿದೆ ಅಂತಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ. ಗೃಹಲಕ್ಷ್ಮಿ ಯೋಜನೆಯ 11 ತಿಂಗಳ ಹಣ ಬಿಡುಗಡೆಯಾಗಿದ್ದು, ಬಾಕಿ ಉಳಿದಿರುವ ಜೂನ್‌, ಜುಲೈ ಹಾಗೂ ಆಗಸ್ಟ್ ತಿಂಗಳ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ತಿಳಿಸಿವೆ. ಹಾಗಾಗಿ ಸಪ್ಟೆಂಬರ್ ತಿಂಗಳ ಕೊನೆಯಲ್ಲಿ ಹಣ ಕೈ ಸೇರಬಹುದು ಎನ್ನಲಾಗುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunafu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.