ಬಿಗ್ ಬಾಸ್ ಒಳಗೆ ಹೋದವರು ಪ್ರಗ್ನೆಂಟ್ ಆಗಿ ಹೊರಬರುತ್ತಾರೆ, ಮನೆಯಲ್ಲಿ ನ ಡೆಯುವುದೇನು

 | 
ಲ

ಸಂಕ್ರಾಂತಿ ಸಂಭ್ರಮಕ್ಕೆ ನೋ ಎಲಿಮಿನೇಷನ್‌ ಸಿಹಿ ಕೊಟ್ಟಿರುವ ಬಿಗ್‌ಬಾಸ್‌, ಹೊಸ ವಾರಕ್ಕೆ ಸ್ಪರ್ಧಿಗಳಿಗೆ ಹೊಸ ಹೊಸ ಟಾಸ್ಕ್‌ಗಳನ್ನು ನೀಡುತ್ತಿದ್ದಾರೆ. ಸದಸ್ಯರ ನಡುವಿನ ಸ್ಪರ್ಧೆಯ ತುರುಸನ್ನು ಹೆಚ್ಚಿಸುವ ಬೆಂಕಿ ಚಟುವಟಿಕೆಯೊಂದು ಮನೆಯೊಳಗೆ ನಡೆದಿದೆ. ಜಿಯೋಸಿನೆಮಾ ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಅದರ ಝಲಕ್ ಜಾಹೀರಾಗಿದೆ. ಈ ವಾರದ ನಾಮಿನೇಷನ್‌ನಲ್ಲಿ ನಿಮ್ಮೊಳಗಿರುವ ಗೆಲುವಿನ ಕಿಚ್ಚಿಗೆ ಇಬ್ಬರು ಸದಸ್ಯರು ಬಲಿಯಾಗಬೇಕು ಎಂದು ಹೇಳಿದ್ದಾರೆ.

ಎದುರಿಗೆ ಧಗದಹಿಸಿ ಉರಿಯುತ್ತಿರುವ ಬೆಂಕಿಗೆ ತಾವು ಇಚ್ಛಿಸಿರುವ ಇಬ್ಬರು ಸದಸ್ಯರ ಫೊಟೊಗಳನ್ನು ಹಾಕಬೇಕು. ಮನೆಯೊಳಗೇ ರೂಪುಗೊಂಡಿರುವ ಬಾಂಧವ್ಯವೆಲ್ಲವೂ ಈ ಬೆಂಕಿಯಲ್ಲಿ ಹಾದು ಬಣ್ಣ ಬದಲಿಸಿಕೊಳ್ಳುತ್ತಿವೆ. ಕೆಲವು ಉರಿದು ಬೂದಿಯಾಗುತ್ತಿವೆ. ಕೆಲವು ಕರಕಲಾಗುತ್ತಿವೆ. ಯಾವುದಾದರೂ ಬೆಂಕಿಯಲ್ಲಿ ಬೆಂದು ಅಪ್ಪಟ ಚಿನ್ನವಾಗಿ ಹೊರಬರಲಿವೆಯೇ ಎಂದು ಕಾದು ನೋಡಬೇಕಿದೆ.

ಇನ್ನು ಇದರ ಬೆನ್ನಲ್ಲೇ ಕೆಲವರು ಬಿಗ್ ಬಾಸ್ ಕಾರ್ಯಕ್ರಮಕ್ಕೆ ಚಾಟಿ ಏಟು ಬೀಸಿದ್ದಾರೆ.ಶೋನಲ್ಲಿ ಉಳಿಯೋ ಭರದಲ್ಲಿ ಅವಾಚ್ಯ ಶಬ್ದಗಳಲ್ಲಿ ನಿಂದನೆ, ಚಾರಿತ್ರ್ಯ ವಧೆ, ಹೆಣ್ಣುಮಕ್ಕಳ ಮೇಲೆ ಏಕವಚನದ ಬಳಕೆ, ಮಾನಸಿಕವಾಗಿ ಇತರರನ್ನು ಕುಗ್ಗಿಸುವ ಪ್ರಯತ್ನ, ಜೋರು ಧ್ವನಿಯಲ್ಲಿ ಗದರುವುದು, ಹೆದರಿಸುವುದು, ಇವೆಲ್ಲವೂ ಹೆಚ್ಚಾಗಿದೆ. ಚಿಕ್ಕ ಮಕ್ಕಳಿರುವ ತಂದೆ -ತಾಯಂದಿರು ದಯವಿಟ್ಟು ಇಂತಹ ಕಾರ್ಯಕ್ರಮಗಳನ್ನು ಚಿಕ್ಕ ಮಕ್ಕಳ ಎದುರು ನೋಡದಿರಿ. 

ಇದು ನಿಮ್ಮ ಮಗುವಿನ ಮನಸ್ಸಿನ ಮೇಲೆ ಪ್ರತೀಕೂಲ ಪರಿಣಾಮ ಬೀರುತ್ತದೆ. ಹಾಗೂ, ಅವರು ಈ ಸ್ವಭಾವದ ಅನುಕರಣೆ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಜಗಳ ಹೇಗೆ ಮಾಡಬೇಕೆಂದು ತಿಳಿಯಲು, ಸಂಸಾರ ಹೇಗೆ ಮುರಿಯಬೇಕೆಂದು ತಿಳಿಯಲು ಬಿಗ್ಬಾಸ್ ನೋಡಿ. ಇಲ್ಲಿ ಕೇವಲ ಜಗಳ ಗಲಾಟೆ ತುಂಬಿರುತ್ತದೆ. ಇದರಿಂದ ಜನರಿಗೆ ಯಾವ ರೀತಿಯ ಸಂದೇಶ ನೀಡ ಹೊರಟಿದ್ದಾರೆ ಎಂದು ಅರಿವಾಗುತ್ತಿಲ್ಲ ಎಂದು ಮಾದ್ಯಮದ ಮುಂದೆ ನೆಟ್ಟಿಗರೊಬ್ಬರು ಹೇಳಿಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.