ವೆನ್ಲಾಕ್ ಆಸ್ಪತ್ರೆಗೆ ತುಳುನಾಡ ದೈವದ ದೃಷ್ಟಿ; ತನ್ನ ಇರುವಿಕೆ‌ ತೋರಿದ ದೈ ವ

 | 
Hu
 ಸಾಮಾನ್ಯವಾಗಿ ತುಳುನಾಡಿನ ಜನರು ದೈವಗಳನ್ನು ತುಂಬಾ ಹೆಚ್ಚು ನಂಬುತ್ತಾರೆ. ಅಲ್ಲದೆ ದೈವಗಳು ನಂಬಿದವರ ಕೈ ಬಿಡುವುದಿಲ್ಲ ಎಂಬ ಜನರ ನಂಬಿಕೆಗೆ ಇಂಬು ಕೊಡುವಂತಹ ಅದೆಷ್ಟೋ ಘಟನೆಗಳು ನಡೆಯುತ್ತಲೇ ಇವೆ. ಇದೀಗ ದಕ್ಷಿಣ ಕನ್ನಡ ಜಿಲ್ಲಾಸ್ಪತ್ರೆ ವೆನ್ಲಾಕ್‌ನಲ್ಲಿ ಗುಳಿಗ ದೈವದ ಕಾರ್ಣಿಕ ನಡೆದಿದೆ. ಹಾಗಾಗಿ ಮತ್ತೆ ಶಾಂತಿ ನೆಲೆಸಿದೆ.
ಮಂಗಳೂರಿನ ಹಂಪನಕಟ್ಟೆಯಲ್ಲಿ ನಿರ್ಮಾಣವಾಗಿರುವ ಸೂಪರ್ ಸ್ಪೆಷಾಲಿಟಿ ವೆನ್ಲಾಕ್ ಜಿಲ್ಲಾಸ್ಪತ್ರೆಯ ಸರ್ಜಿಕಲ್‌ ಸೂಪರ್ ಸ್ಪೆಷಾಲಿಟಿ ವಿಭಾಗ ನೂತನ ಕಟ್ಟಡ ನಿರ್ಮಾಣ ವೇಳೆ ಗುಳಿಗ ಸಾನಿಧ್ಯವಿದ್ದ ಮರವನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ಇದಾದ ಬಳಿಕ ಅನೇಕ ಸಮಸ್ಯೆ, ಸಾವು, ನೋವುಗಳು ಸಂಭವಿಸಿದ್ದವು.ಅಲ್ಲಿನ ಜನ ಕೂಡ ಕಂಗಾಲು ಆಗಿದ್ದರು.
ಯಾವಾಗ ದೈವ ಸಾನಿಧ್ಯವಿದ್ದ ಮರವನ್ನು ತೆರವು ಮಾಡಲಾಯಿತೋ ಅಂದಿನಿಂದ ಇಲ್ಲಿ ಗುತ್ತಿಗೆದಾರನಿಗೆ ಹಲವು ಸಂಕಷ್ಟಗಳು ಎದುರಾಗಿವೆ. ಕಾರ್ಮಿಕರು, ಹಾಗೂ ಆಸ್ಪತ್ರೆ ಸಿಬ್ಬಂದಿಗಳು ಹಲವು ಅವಘಡಗಳು, ಸಮಸ್ಯೆಗಳಿಗೆ ಸಿಲುಕಿ ಆಸ್ಪತ್ರೆ ಸೇರಿದ್ದಾರೆ. ಕಾಮಗಾರಿಯ ವೇಳೆ ನಾಗರ ಹಾವು ಕೂಡ ಬಲಿಯಾದ ಘಟನೆ ನಡೆದಿದೆ. ಒ.ಟಿ ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಓರ್ವ ಸಿಬ್ಬಂದಿಗೆ ಗಂಭೀರ ಸಮಸ್ಯೆ ಎದುರಾಗಿದೆ. 
ಸದ್ಯ ಇದೀಗ ಕುಂಟುತ್ತಾ ಸಾಗಿದ್ದ ಕಾಮಗಾರಿ ಇತ್ತೀಚೆಗಷ್ಟೇ ಪೂರ್ಣಗೊಂಡು ಆಸ್ಪತ್ರೆಯ ಉದ್ಘಾಟನೆ ಆಗಿದೆ. ಆದ್ರೆ, ಆಸ್ಪತ್ರೆಯಲ್ಲಿ ಇನ್ನೂ ಕೂಡ ಸಮಸ್ಯೆಗಳು ಮುಂದುವರೆದಿವೆ. ಹೀಗಾಗಿ ಆಸ್ಪತ್ರೆಯ ಸಿಬ್ಬಂದಿ ಪ್ರಶ್ನಾಚಿಂತನೆಯ ಮೊರೆ ಹೋಗಿದ್ದು ಈ ವೇಳೆ ಇಲ್ಲಿ ಗುಳಿಗ ದೈವದ ನೆಲೆಯನ್ನು ಕಿತ್ತು ಹಾಕಿದ್ದು ದೈವ ಅತಂತ್ರವಾಗಿದೆ ಅನ್ನೋ ವಿಚಾರ ಬೆಳಕಿಗೆ ಬಂದಿದೆ.
ಈ ಹಿಂದೆ ಗುಳಿಗ ದೈವದ ಸಾನಿಧ್ಯವಿದ್ದು ಗುಳಿಗ ದೈವ ಕೋಪಗೊಂಡಿರುವುದು ಬೆಳಕಿಗೆ ಬಂದಿದೆ. ಸದ್ಯ ಈಗ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳೇ ಹಣ ಸಂಗ್ರಹಿಸಿ ಗುಳಿಗ ದೈವದ ಪುನರ್ ಪ್ರತಿಷ್ಠಾಪನೆ ಮಾಡಿದ್ದಾರೆ. ಸ್ಥಳಾಂತರ ಮಾಡಿದ್ದ ಅಶ್ವಥ ಮರದ ಬುಡದಲ್ಲೇ ಗುಳಿಗ ದೈವಕ್ಕೆ ಕಟ್ಟೆ ನಿರ್ಮಾಣ ಮಾಡಲಾಗಿದೆ. ಪ್ರಾಯಶ್ಚಿತ ಸಹಿತ ವಿವಿಧ ಧಾರ್ಮಿಕ ವಿಧಿಗಳನ್ನು ನಡೆಸಲಾಗಿದೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.