ಮಂಗಳೂರು ಹುಡುಗ ಶೈನ್ ಶೆಟ್ಟಿ ಕೈ ಹಿಡಿದ ಕಿರುತೆರೆ ನಟಿ ಅಂಕಿತಾ ಅಮರ್

 | 
Hu

ಅಂಕಿತಾ ಅಮರ್ ಚಿತ್ರ ರಂಗದ ಚಂದದ ಪ್ರತಿಭೆ. ಹೌದು ಇತ್ತಿಚಿಗೆ ಅವರು ಸದ್ದಿಲ್ಲದೆ ಜಸ್ಟ್ ಮಾರೀಡ್ ಅಂದಿದ್ದಾರೆ. ಅಜನೀಶ್ ಲೋಕನಾಥ್ ಮತ್ತು ಸಿ.ಆರ್. ಬಾಬಿ ಅವರು ಜಸ್ಟ್ ಮ್ಯಾರೀಡ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸಿ.ಆರ್. ಬಾಬಿ ನಿರ್ದೇಶನ ಮಾಡುತ್ತಿದ್ದಾರೆ. 

ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಕಿರುತೆರೆ ಕಲಾವಿದೆ ಅಂಕಿತಾ ಅಮರ್ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಜಸ್ಟ್​ ಮ್ಯಾರೀಡ್​’ ಸಿನಿಮಾ ತಂಡದಿಂದ ಒಂದು ಗುಡ್​ ನ್ಯೂಸ್​ ಕೇಳಿಬಂದಿದೆ. ಅದೇನೆಂದರೆ, ಈ ಚಿತ್ರಕ್ಕೆ ಶೂಟಿಂಗ್​ ಮುಕ್ತಾಯ ಆಗಿದೆ. ದೊಡ್ಡ ಪರದೆಯಲ್ಲಿ ಶೈನ್​ ಶೆಟ್ಟಿ ಹಾಗೂ ಅಂಕಿತಾ ಅಮರ್​ ಅವರನ್ನು ಜೋಡಿಯಾಗಿ ನೋಡಬೇಕು ಎಂದು ಕಾದಿರುವ ಅಭಿಮಾನಿಗಳಿಗೆ ಈ ನ್ಯೂಸ್​ ಕೇಳಿ ಖುಷಿ ಆಗಿದೆ.

ಜಸ್ಟ್ ಮ್ಯಾರೀಡ್’ ಸಿನಿಮಾಗೆ ಬೆಂಗಳೂರು, ಮೈಸೂರು ಹಾಗೂ ಚಿಕ್ಕಮಗಳೂರಿನಲ್ಲಿ 45 ದಿನಗಳ ಕಾಲ ಶೂಟಿಂಗ್​ ಮಾಡಲಾಗಿದೆ. ಈಗ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಬಿರುಸಿನಿಂದ ಸಾಗಿವೆ. ಹಲವು ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿ ಜನಪ್ರಿಯತೆ ಪಡೆದ ಅಜನೀಶ್ ಲೋಕನಾಥ್ ಅವರು ಈ ಸಿನಿಮಾದ ಮೂಲಕ ನಿರ್ಮಾಪಕರಾಗಿ ಬಡ್ತಿ ಪಡೆದಿದ್ದಾರೆ.

 ಸಿ.ಆರ್.ಬಾಬಿ ಅವರು ಈ ಸಿನಿಮಾದ ನಿರ್ಮಾಣದಲ್ಲಿ ಅಜನೀಶ್​ಗೆ ಸಾಥ್ ನೀಡಿದ್ದಾರೆ. ಸಿ.ಆರ್. ಬಾಬಿ ಅವರು ಇಷ್ಟು ದಿನಗಳ ಕಾಲ ಸಂಗೀತ ಕ್ಷೇತ್ರದಲ್ಲಿ ಬ್ಯುಸಿ ಆಗಿದ್ದರು. ಈಗ ಸಿನಿಮಾ ನಿರ್ದೇಶಕಿಯಾಗಿ ಕನ್ನಡ ಚಿತ್ರರಂಗದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಈ ಸಿನಿಮಾದಲ್ಲಿ 6 ಸುಮಧುರ ಗೀತೆಗಳು ಇರಲಿವೆ. ಅವುಗಳಿಗೆ ಅಜನೀಶ್ ಲೋಕನಾಥ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

ಅವುಗಳ ಪೈಕಿ, ಪ್ರಮೋದ್ ಮರವಂತೆ ಬರೆದ, ವಿಜಯ್ ಪ್ರಕಾಶ್ ಧ್ವನಿ ನೀಡಿದ ‘ಅಭಿಮಾನಿಯಾಗಿ ಹೋದೆ..’ ಗೀತೆ ಇತ್ತೀಚಿಗೆ ರಿಲೀಸ್​ ಆಗಿ ಮೆಚ್ಚುಗೆ ಪಡೆದಿದೆ. ‘ಜಸ್ಟ್ ಮ್ಯಾರೀಡ್’ ಒಂದು ಲವ್​ ಸ್ಟೋರಿ ಸಿನಿಮಾ ಆಗಿದ್ದರೂ ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಅಂಶಗಳು ಇರಲಿವೆ ಎಂದು ಚಿತ್ರತಂಡ ಹೇಳಿಕೊಂಡಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.