ಎಲ್ಲಾ ರಾಜ್ಯಕ್ಕೂ ಮಾದರಿಯಾದ ಉತ್ತರಪ್ರದೇಶ, 19 ವಷ೯ದ ವಿದ್ಯಾಥಿ೯ನಿ ಪ್ರಾಣ ತೆಗೆದಿದ್ದ ಕಿರಾತಕ ಎನ್ ಕೌಂಟರ್

 | 
Bvg

 ಕಳೆದ ವಾರ ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ 19 ವರ್ಷದ ಯುವತಿಯ ಸಾವಿಗೆ ಕಾರಣವಾಗಿದ್ದ ಮೊಬೈಲ್​ ದರೋಡೆ ಪ್ರಕರಣದ ಆರೋಪಿಗಳ ಪೈಕಿ ಒಬ್ಬನನ್ನು ಭಾನುವಾರ ತಡರಾತ್ರಿ ಪೊಲೀಸರು ಎನ್​ಕೌಂಟರ್​ ಮಾಡಿದ್ದಾರೆ. ಘಾಜಿಯಾಬಾದ್​ನ ಮಿಶಾಲ್​ ಗರ್ಹಿ ಎಂಬಲ್ಲಿನ ನಿವಾಸಿ, ಆರೋಪಿ ಜಿತೇಂದ್ರ ಅಲಿಯಾಸ್​ ಜೀತು ಮೃತಪಟ್ಟಿದ್ದಾನೆ ಎನ್ನಲಾಗ್ತಿದೆ. 

ಇನ್ನು ಈ ಕುರಿತಾಗಿ ಉತ್ತರ ಪ್ರದೇಶ ಪೊಲೀಸರನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಶ್ಲಾಘಿಸಿದ್ದಾರೆ. ಏಕೆಂದರೆ ಕಳೆದ ಐದು ವರ್ಷಗಳಲ್ಲಿ 168 ಮೋಸ್ಟ್ ವಾಂಟೆಡ್​ ಕ್ರಿಮಿನಲ್​​ಗಳನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಇದರಿಂದ ಸಿಟಿ ಶಾಂತವಾಗಿ ಇರುವಂತಾಗಿದೆ ಎಂದಿದ್ದಾರೆ.

ಅಕ್ಟೋಬರ್​ 27ರಂದು ಘಾಜಿಯಾಬಾದ್​ನ ಎಬಿಇಎಸ್​ ಇಂಜಿನಿಯರಿಂಗ್​ ಕಾಲೇಜಿನ ಬಿ.ಟೆಕ್​​ ವಿದ್ಯಾರ್ಥಿನಿ ಕೀರ್ತಿ ಸಿಂಗ್  ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಬೈಕ್​ನಲ್ಲಿ ಬಂದ ಇಬ್ಬರು ಮೊಬೈಲ್​ ಕಸಿದುಕೊಳ್ಳಲು ಯತ್ನಿಸಿದ್ದಾರೆ. ದುಷ್ಕರ್ಮಿಗಳಿಂದ ಮೊಬೈಲ್​ ಕಾಪಾಡಿಕೊಳ್ಳುವ ಪ್ರಯತ್ನದಲ್ಲಿ ಕೀರ್ತಿ ಆಟೋದಿಂದ ಕೆಳಗೆ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು.

ಅದೇ ರಾತ್ರಿ ಮಸೂರಿ ಪೊಲೀಸರು ಗಂಗಾನಹರ್​ ಟ್ರ್ಯಾಕ್​​ನಲ್ಲಿ ತಪಾಸಣೆ ನಡೆಸುತ್ತಿದ್ದರು. ರಸ್ತೆಯಲ್ಲಿ ಇಬ್ಬರು ಬೈಕ್​ನಲ್ಲಿ ಬರುತ್ತಿರುವುದನ್ನು ಗಮನಿಸಿದ್ದಾರೆ. ಪೊಲೀಸರ ತಂಡ ಅವರನ್ನು ತಡೆಯಲು ಮುಂದಾದಾಗ, ಓಡಿ ಹೋಗಲು ಪ್ರಯತ್ನಿಸಿದ್ದಾರೆ. ಮಾತ್ರವಲ್ಲ, ಪೊಲೀಸರ ಮೇಲೆಯೇ ಗುಂಡು ಹಾರಿಸಿದ್ದಾರೆ. ಸಬ್‌ಇನ್​ಸ್ಪೆಕ್ಟರ್​ ಒಬ್ಬರು ಗಾಯಗೊಂಡರು. ಆತ್ಮರಕ್ಷಣೆಗಾಗಿ ಪೊಲೀಸರು ಪ್ರತಿಯಾಗಿ ಗುಂಡು ಹಾರಿಸಿದಾಗ ಒಬ್ಬ ಗಾಯಗೊಂಡು, ಇನ್ನೊಬ್ಬ ಸ್ಥಳದಿಂದ ಪರಾರಿಯಾದ. ಗಾಯಾಳು ಆರೋಪಿ ಸಾವನ್ನಪ್ಪಿದ್ದಾನೆ. ಈತನ ವಿರುದ್ಧ ಈ ಹಿಂದೆ 12 ಪ್ರಕರಣಗಳು ದಾಖಲಾಗಿವೆ. ಅವುಗಳ ಪೈಕಿ 6ಕ್ಕೂ ಹೆಚ್ಚು ದರೋಡೆ ಪ್ರಕರಣಗಳಿವೆ ಎಂದು ಪೋಲಿಸರು ತಿಳಿಸಿದ್ದಾರೆ.


( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.