ಹನಿಮೂನ್ ನ ರೈಡ್ ನಲ್ಲಿ ಸಕ್ಕತ್ ಡ್ಯಾನ್ಸ್ ಮಾಡಿದ ವೈಷ್ಣವಿ ಗೌಡ, ಗಂಡ ಫಿದಾ
Updated: Jul 1, 2025, 19:09 IST
|

ಮದುವೆಯಾದ ಮೇಲೆ ಹನಿಮೂನ್ ಹೋಗೋದು ಕಾಮನ್ ಹೌದು ಕಿರುತೆರೆ ಧಾರಾವಾಹಿ ಹಾಗೂ ಬಿಗ್‌ಬಾಸ್ ಖ್ಯಾತಿಯ ವೈಷ್ಣವಿ ಗೌಡ 2025ರ ಜೂನ್ ತಿಂಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅನುಕೂಲ್ ಮಿಶ್ರಾ ಜೊತೆ ಹಸೆಮಣೆ ಏರಿದ್ದ ನಟಿ ವೈಷ್ಣವಿ ಗೌಡ ಸದ್ಯ ಹನಿಮೂನ್ ಟ್ರಿಪ್‌ನಲ್ಲಿದ್ದಾರೆ. ಪತಿ ಜೊತೆ ಇತ್ತೀಚಿಗೆ ಉತ್ತರಾಖಂಡ್ ಋಷಿಕೇಶ್ ಬಳಿಯಿರುವ ಶಿವಪುರಿಯಲ್ಲಿ ಬಂಗೀ ಜಂಪ್ ಮಾಡಿ ಸಂಭ್ರಮಿಸಿದ್ದರು.
ಉತ್ತರಾಖಂಡ್ ಋಷಿಕೇಶ್ ಬಳಿಯಿರುವ ಶಿವಪುರಿಯಲ್ಲಿ ವೈಷ್ಣವಿ ಗೌಡ ಹಾಗೂ ಪತಿ ಅನುಕೂಲ್ ಮಿಶ್ರಾ ಬರೋಬ್ಬರಿ 117 ಅಡಿ ಎತ್ತರದಿಂದ ಜಿಗಿದು ಸಂಭ್ರಮ ಪಟ್ಟಿದ್ದರು. ಉತ್ತರ ಭಾರತದಲ್ಲಿ ಹನಿಮೂನ್ ಪ್ರವಾಸವನ್ನ ಕೈಗೊಂಡಿರುವ ವೈಷ್ಣವಿ ಗೌಡ ಹಾಗೂ ಅನುಕೂಲ್ ಮಿಶ್ರಾ ಮನಾಲಿಯಲ್ಲಿ ಬಗೆ ಬಗೆಯ ಬಟ್ಟೆತೊಟ್ಟು ಪೋಸ್ ಕೊಟ್ಟಿದ್ದರು. ಆ ಫೋಟೋಗಳನ್ನ ಜಾಲತಾಣದಲ್ಲಿ ಹಂಚಿಕೊಂಡಿದ್ದರು ವೈಷ್ಣವಿ.
ವೈಷ್ಣವಿ ಗೌಡ ಹನಿಮೂನ್ ಟ್ರಿಪ್ ಅನ್ನ ಸಖತ್ ಎಂಜಾಯ್ ಮಾಡ್ತಿದ್ದು, ಡ್ಯಾನ್ಸ್ ಮಾಡಿರುವ ವಿಡಿಯೋವನ್ನ ಪೋಸ್ಟ್ ಮಾಡಿದ್ದಾರೆ. ವಿಡಿಯೋ ಕ್ರೆಡಿಟ್ ಹಸ್ಬಂಡ್ ಎಂದು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ನೋಡಿದ ವೈಷ್ಣವಿ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಖುಷಿಯಿಂದ ಲೈಕ್ ಮಾಡಿದ್ರೆ ಇನ್ನು ಕೆಲವ್ರು ಈ ಆಷಾಡ ಮಾಸದಲ್ಲಿ ಯಾಕೆ ಹನಿಮೂನ್ ಬೇರೆ ಟೈಂ ಇರಲಿಲ್ಲವಾ ಅಂತಾ ಪ್ರಶ್ನೆ ಮಾಡಿದ್ದಾರೆ.
ವೈಷ್ಣವಿ ಅವರು ಶೀಘ್ರದಲ್ಲೇ ಅದ್ಭುತವಾದ ಯೋಜನೆಯೊಂದಿಗೆ ನಿಮ್ಮನ್ನು ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ. ಸೀತಾ ರಾಮ ಸೀರಿಯಲ್ ಮುಗಿಯುತ್ತಿದ್ದಂತೆ ವೈಷ್ಣವಿ ಮತ್ತೆ ತೆರೆ ಮೇಲೆ ಬರೋದಕ್ಕೆ ಸಜ್ಜಾಗಿರಬಹುದು ಎಂದು ಹೇಳಲಾಗುತ್ತಿದೆ. ಅಲ್ಲದೆ ವೈಷ್ಣವಿ ಅವರು ನಾನು ಕರ್ನಾಟಕ, ಕನ್ನಡ ಭಾಷೆ ಬಿಟ್ಟು ಬೇರೆ ಎಲ್ಲೂ ಹೋಗುವುದಿಲ್ಲ ಎಂದೂ ಹೇಳಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ. ೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂೂ