ಕೋಟ್ಯಾಂತರ ರೂಪಾಯಿ ಆಸ್ತಿ ಬದಿಗಿಟ್ಟು, ಜನಸ್ನೇಹಿ ಆಶ್ರಮಕ್ಕೆ ಭೇಟಿ ಕೊಟ್ಟ ವಿನೋದ್ ರಾಜ್ಕುಮಾರ್

 | 
ರಾ
ಕನ್ನಡದಲ್ಲಿ ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಸೇರಿದಂತೆ ಹಲವು ಸೂಪರ್​ ಹಿಟ್​ ಸಿನಿಮಾ ಮೂಲಕ ಅಭಿಮಾನಿಗಳನ್ನು ಸಂಪಾದಿಸಿದ್ದ ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ ಅವರು ಡಿಸೆಂಬರ್ 8 ರಂದು ವಯೋಸಹಜ ಖಾಯಿಲೆಗಳಿಂದಾಗಿ ಇಹಲೋಕ ತ್ಯಜಿಸಿದ್ದರು. 
ನೆಲಮಂಗಲದ ಅವರ ತೋಟದ ಮನೆಯಲ್ಲಿಯೇ ಸಕಲ ಸರ್ಕಾರೀ ಗೌರವಗಳೊಂದಿಗೆ ನಟಿಗೆ ಅಂತಿಮ ಸಂಸ್ಕಾರ ಮಾಡಲಾಗಿತ್ತು. ಇಂದು ಮಧ‍್ಯಾಹ್ನ 12.30 ರ ನಂತರ ಲೀಲಾವತಿ ಅವರ ವೈಕುಂಠ ಸಮಾರಾಧನೆ ಕಾರ್ಯಕ್ರಮಗಳು ನಡೆಯಲಿವೆ. ಲೀಲಾವತಿ ಕುಟುಂಬಸ್ಥರು ಆಪ್ತರು ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಲೀಲಾವತಿ ಅವರು ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದರು. ಕನ್ನಡದಲ್ಲಿ ಅಷ್ಟೇ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಚಿತ್ರಗಳಲ್ಲಿ ನಟಿಸಿದ್ದರು. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು ಲೀಲಾವತಿ ಅವರಿಗೆ ನೀಡಲಾಗಿತ್ತು. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದ್ದರು.
ಇನ್ನು ವೈಕುಂಠ ಸಮಾರಾಧನೆ ನಿಮಿತ್ತ ಲೀಲಾವತಿ ಸಮಾಧಿಗೆ ಹೂವಿನ ಅಲಂಕಾರ ಮಾಡಲಾಗಿದೆ. ಪುತ್ರ ವಿನೋದ್ ರಾಜ್ ಪೂಜಾ ವಿಧಿ ವಿಧಾನಗಳನ್ನು ಮಾಡಲಿದ್ದಾರೆ. ಜೊತೆಗೆ ಕೆಲವು ಸೆಲೆಬ್ರಿಟಿಗಳು, ಆಪ್ತರೂ ಇಂದು ಲೀಲಾವತಿ ನಿವಾಸಕ್ಕೆ ಭೇಟಿ ನೀಡುವ ಸಂಭವವಿದೆ ಎಂದು ವಿನೋದ್ ರಾಜ್ ಅವರು ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.