ಅವಕಾಶವಿಲ್ಲದೆ ಸುತ್ತಾಡುತ್ತಿರುವ ಮಂಗಳೂರಿನ ಶ್ರೀ ನಿಧಿ ಶೆಟ್ಟಿಗೆ ದೈವ ಹೇಳಿದ್ದೇನು ಗೊ ತ್ತಾ
ಬ್ಲಾಕ್ಬಸ್ಟರ್ ಕನ್ನಡ ಸಿನಿಮಾ ಕೆಜಿಎಫ್ನಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರಿಗೆ ನಾಯಕಿಯಾಗಿ ನಟಿಸಿ ಸಾಕಷ್ಟು ಜನಪ್ರಿಯರಾಗಿರುವ ಶ್ರೀನಿಧಿ ಶೆಟ್ಟಿ ಕರಾವಳಿಯ ದೈವ ಕೋಲದಲ್ಲಿ ಭಾಗಿಯಾಗಿ ಗಮನ ಸೆಳೆದರು. ಮಂಗಳೂರಿನ ಹೊರವಲಯದ ಕಿನ್ನಿಗೋಳಿಯಲ್ಲಿರುವ ನಟಿ ಕುಟುಂಬದ ಮನೆ ತಾಳಿಪಾಡಿಗುತ್ತುವಿನಲ್ಲಿ ಹರಕೆ ನೇಮ ನಡೆಯಿತು.
ಶ್ರೀನಿಧಿ ಶೆಟ್ಟಿ ಈ ಹಿಂದೆ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಕುಟುಂಬ ದೈವಗಳಾದ ಜಾರಂದಾಯ, ಬಂಟ ಹಾಗೂ ಪರಿವಾರ ದೈವಗಳಿಗೆ ನೇಮ ನೀಡುವುದಾಗಿ ಹರಕೆ ಹೊತ್ತಿದ್ದರು. ಇದೀಗ ತಾಳಿಪಾಡಿಗುತ್ತುವಿಗೆ ಕುಟುಂಬ ಸದಸ್ಯರೊಂದಿಗೆ ಆಗಮಿಸಿ ನೇಮದಲ್ಲಿ ಪಾಲ್ಗೊಂಡಿದ್ದಾರೆ. ತಮ್ಮ ಯಶಸ್ಸಿನ ಹಿಂದೆ ಕುಟುಂಬದ ದೈವಗಳ ಆಶೀರ್ವಾದವಿದ್ದು, ಇಷ್ಟಾರ್ಥ ಸಿದ್ಧಿಗಾಗಿ ಈ ಹರಕೆ ಕೋಲ ಸಲ್ಲಿಸಿದ್ದಾರೆ.
ನೇಮದ ವೇಳೆ ಇನ್ನಷ್ಟು ಎತ್ತರಕ್ಕೆ ಬೆಳೆಯುತ್ತಿ ಎಂದು ದೈವಗಳು ನಟಿಗೆ ಅಭಯ ನೀಡಿವೆ.ಕೆಜಿಎಫ್ ಸಿನಿಮಾದ ಬಳಿಕ ತಮಿಳಿನ ಕೋಬ್ರಾ ಸಿನಿಮಾದಲ್ಲಿ ನಟಿಸಿದ್ದಾರೆ. ತೆಲುಗಿನ ತೆಲುಸು ಕದಾದಲ್ಲಿ ನಟಿಸುತ್ತಿದ್ದಾರೆ. ವಿಕ್ರಮ್ ನಟನೆಯ ಕೋಬ್ರಾ ಸಿನಿಮಾವು ಬಾಕ್ಸ್ ಆಫೀಸ್‌ನಲ್ಲಿ 59 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಮಂಗಳೂರು ಬಂಟ್ ಕುಟುಂಬದ ಇವರು ಶ್ರೀ ನಾರಾಯಣ ಗುರು ಇಂಗ್ಲಿಷ್ ಮೀಡಿಯಂ ಸ್ಕೂಲ್ ಮತ್ತು ಸೇಂಟ್ ಅಲೋಸಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದಾರೆ.
ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ.ಶ್ರೀನಿಧಿ ಶೆಟ್ಟಿಯವರ ಮುಂದಿನ ಸಿನಿಮಾ ಕಿಚ್ಚ ಸುದೀಪ್ ಜತೆಗಿರಲಿದೆ. ಸದ್ಯ ಸುದೀಪ್ ಮ್ಯಾಕ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದರ ನಂತರದ ಸಿನಿಮಾ ಅಂದರೆ ಕಿಚ್ಚ 47 ಸಿನಿಮಾಕ್ಕೆ ಶ್ರೀನಿಧಿ ಶೆಟ್ಟಿ ನಾಯಕಿಯಾಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.