ಹೆಣ್ಣುಮಕ್ಕಳ ಹಿಜಾಬ್ ಬಗ್ಗೆ ಸಿದ್ದರಾಮಯ್ಯ ಹೇ.ಳಿದ್ದೇನು ಗೊ ತ್ತಾ, ತ.ಲೆಕೆಡಿಸಿಕೊಂಡ ಅಂಧ ಭಕ್ತರು
ಪ್ರಧಾನಿ ನರೇಂದ್ರ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಶುಕ್ರವಾರ ಸಂಜೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದರು.
ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಹಿಜಾಬ್ ನಿಷೇಧವನ್ನು ನಮ್ಮ ಸರ್ಕಾರ ಹಿಂಪಡೆಯುತ್ತಿದೆ ಎಂದು ಶುಕ್ರವಾರವಷ್ಟೇ ಘೋಷಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶನಿವಾರದಂದು ಇದಕ್ಕೆ ವ್ಯತಿರಿಕ್ತವಾದ ಹೇಳಿಕೆಯೊಂದನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ನಿಷೇಧವನ್ನು ಹಿಂಪಡೆಯಬೇಕು ಎಂಬ ಚಿಂತನೆ ಸರ್ಕಾರಕ್ಕಿದೆ.
ಇದೇ ಶೈಕ್ಷಣಿಕ ವರ್ಷದಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ಅಲ್ಲಿಗೆ, ಹಿಜಾಬ್ ನಿಷೇಧವನ್ನು ಇನ್ನೂ ಹಿಂಪಡೆಯಲಾಗಿಲ್ಲ ಎಂಬುದು ಸ್ಪಷ್ಟವಾಗಿದೆ. ಅನೇಕ ಪ್ರಗತಿಪರರು, ಮುಸ್ಲಿಂ ಸಮುದಾಯದ ಮುಖಂಡರು ಈ ನಿರ್ಧಾರವನ್ನು ಸ್ವಾಗತಿಸಿದ್ದರೆ, ಬಲಪಂಥೀಯರು ಹಾಗೂ ಬಿಜೆಪಿ ನಾಯಕರು ಸಿಎಂ ನಿರ್ಧಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು.
ಇದರ ಬೆನ್ನಲ್ಲೇ ಶನಿವಾರದಂದು, ಹಿಜಾಬ್ ನಿಷೇಧ ಹಿಂಪಡೆಯುವ ಚಿಂತನೆ ಸರ್ಕಾರಕ್ಕಿದೆ. ಅತಿ ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಹೇಳಿರುವುದು ಎಲ್ಲರಿಗೂ ಅಚ್ಚರಿ ತಂದಿದೆ. ವ್ಯಾಪಕ ಟೀಕೆಗಳಿಗೆ ಸಿದ್ದರಾಮಯ್ಯ ತಲೆಬಾಗಿ ಹೀಗೆ ಉಲ್ಟಾ ಹೊಡೆಯುತ್ತಿದ್ದಾರೆ ಎಂದು ಹಲವಾರು ಮಂದಿ ಹೇಳಲಾರಂಭಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.