ಗೃಹಲಕ್ಷ್ಮಿ ಅವರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಕೊಟ್ಟ ಗುಡ್ ನ್ಯೂಸ್ ಏನು? ಮೆಚ್ಚಿಕೊಂಡ ಮಹಿಳೆಯರು

 | 
Nx

ಗೃಹಲಕ್ಷ್ಮಿ ಯೋಜನೆಗೆ ಇತ್ತೀಚಿಗೆ ನೋಂದಣಿ ಆರಂಭವಾಗಿದೆ. ಈ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಯಾವಾಗ ಬರುತ್ತೆ? ಯಾರಿಗೆ ಬರುತ್ತೆ? ನೋಂದಣಿ ಹೇಗೆ ಮಾಡಿಸಬೇಕು ಎಂಬುದು ಸೇರಿದಂತೆ ಅಗತ್ಯ ಮಾಹಿತಿ ಇಲ್ಲಿದೆ. ಈ ಮಾಹಿತಿಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದಾರೆ. 

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳ ಪೈಕಿ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ 4ನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆಯನ್ನು ಅಧಿಕಾರಕ್ಕೆ ಬಂದ ಎರಡನೇ ತಿಂಗಳಿಗೆ ಜಾರಿ ಮಾಡುತ್ತಿದೆ. ವಿಧಾನಸೌಧದಲ್ಲಿ ಜುಲೈ 19ರ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಅಧಿಕೃತವಾಗಿ ಚಾಲನೆ ನೀಡಿದರು.

ಗೃಹಲಕ್ಷ್ಮಿ ಯೋಜನೆಯ 2,000 ರೂಪಾಯಿ ಯಾರಿಗೆ’ ಹೀಗೊಂದು ಪ್ರಶ್ನೆ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಗೃಹಲಕ್ಷ್ಮಿ ಯೋಜನೆಯ ಪ್ರಕಾರ ನೀಡುವ 2,000 ರೂಪಾಯಿ ಅತ್ತೆಗಾ ಅಥವಾ ಸೊಸೆಗಾ ಎಂಬುದೂ ಚರ್ಚೆಗೆ ಕಾರಣವಾಗಿತ್ತು. ಅದಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟನೆ ನೀಡಿದ್ದು, ಗೊಂದಲ ಬಗೆಹರಿಸಿದ್ದಾರೆ. ಮನೆಯೊಡತಿಯೇ ಗೃಹಲಕ್ಷ್ಮಿ. ಅವರಿಗೇ 2,000 ರೂಪಾಯಿ ಎಂದು ಗೃಹಲಕ್ಷ್ಮಿ ಎಂದು ಕಾಂಗ್ರೆಸ್‌ ಸರ್ಕಾರ ಪ್ರಕಟಿಸಿತ್ತು. 

ಮನೆಯೊಡತಿ ಯಾರು? ಅತ್ತೆಯಾ ಅಥವಾ ಸೊಸೆಯಾ’ ಎಂಬುದು ಗೊಂದಲಕ್ಕೆ ಕಾರಣವಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅತ್ತೆಯೇ ಮನೆಯೊಡತಿ. ಅವರಿಗೇ ಗೃಹಲಕ್ಷ್ಮೀ ಯೋಜನೆಯ ಹಣ ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದರು. ನಮ್ಮ ಸಂಪ್ರದಾಯದ ಪ್ರಕಾರ, ಅತ್ತೆಯೇ ಮನೆಯ ಒಡತಿ. ಹೀಗಾಗಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸರ್ಕಾರ ಅತ್ತೆಗೆ ನೀಡಲಿದೆ. ಆ ಹಣವನ್ನು ಅತ್ತೆ ಬೇಕಾದರೆ ಪ್ರೀತಿಯಿಂದ ಸೊಸೆಗೆ ನೀಡಿದರೆ ನಮ್ಮ ಅಭ್ಯಂತರ ಏನೂ ಇಲ್ಲ ಎಂದು ಸಚಿವರು ಹೇಳಿದ್ದರು. 

ಮನೆ ಬಾಗಿಲಿಗೆ ಭೇಟಿ ಕೊಡುವ ಪ್ರಜಾಪ್ರತಿನಿಧಿಗಳ ಮೂಲಕ ಯೋಜನೆಗೆ ಸುಲಭವಾಗಿ ನೋಂದಣಿ ಮಾಡಿಸಿಕೊಳ್ಳಬಹುದು. ರೇಷನ್ ಕಾರ್ಡ್, ಅಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಫಲಾನುಭವಿಗಳು ಒದಗಿಸಬೇಕಾಗುತ್ತದೆ ಎಂದು ಸಚಿವರು ತಿಳಿಸಿದ್ದರು. ನೋಂದಣಿ ಮಾಡಿಕೊಂಡ ಫಲಾನುಭವಿಗಳ ಖಾತೆಗೆ ಆಗಸ್ಟ್‌ನಿಂದ 2 ಸಾವಿರ ರೂಪಾಯಿ ಜಮೆಯಾಗಲಿದೆ. 

ರಾಜ್ಯದ ಮಹಿಳೆಯರು ಕಾತರದಿಂದ ಕಾಯುತ್ತಿರುವ ಈ ಮಹತ್ವಾಕಾಂಕ್ಷಿ ಈ ಯೋಜನೆಗೆ ನೋಂದಣಿ ಆರಂಭವಾಗುವುದಕ್ಕೂ ಮೊದಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಅತ್ಯಗತ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.