ಜೈಲಿಂದ ಬಂದ ತಕ್ಷಣ ಸೋನು ಗೌಡ ಮಾಡಿದ ಮೊದಲ‌ ಕೆಲಸ ಏನು‌ ಗೊ.ತ್ತಾ

 | 
Hj
ಹೆಣ್ಣು ಮಗುವನ್ನು ಕಾನೂನು ಬಾಹಿರವಾಗಿ ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ ಬಾಸ್ ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಜೈಲು ವಾಸ ಅನುಭವಿಸಬೇಕಾಯ್ತು. 11 ದಿನಗಳ ಬಳಿಕ ಸೋನು ಗೌಡಗೆ ಸೆರೆಮನೆ ವಾಸ ಮುಕ್ತಾಯವಾಗಿದ್ದು, ರೀಲ್ಸ್ ರಾಣಿ ಜೈಲಿನಿಂದ ಹೊರಗೆ ಬಂದಿದ್ದಾರೆ.  
ಜಾಮೀನು ಷರತ್ತು ಪೂರೈಸಿದ ನಂತರ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. 3 ದಿನಗಳ ಹಿಂದಷ್ಟೇ ಸೋನು ಗೌಡಗೆ ಕೋರ್ಟ್​ ಜಾಮೀನು ಮಂಜೂರು ಮಾಡಿತ್ತು. ಇಬ್ಬರ ಶ್ಯೂರಿಟಿ ಜೊತೆಗೆ 1 ಲಕ್ಷ ರೂ. ಬಾಂಡ್ ಷರತ್ತು ವಿಧಿಸಲಾಯ್ತು.
8 ವರ್ಷದ ಹೆಣ್ಣು ಮಗುವನ್ನು ನಿಯಮಾನುಸಾರ ದತ್ತು ಪಡೆಯದೇ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಸೋನು ಗೌಡ ಅವರನ್ನು ಮಾರ್ಚ್ 22 ರಂದು ಬೆಳಗಿನ ಜಾವ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದರು. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಸೋನು ಗೌಡರನ್ನು ವಶಕ್ಕೆ ಪಡೆದಿದ್ದರು.
ಬಂಧನದ ಬಳಿಕ ಸೋನು ಗೌಡ ಅವರನ್ನು ನಾಲ್ಕು ದಿನದ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ನಂತರ ಸೋನು ಶ್ರೀನಿವಾಸ್ ಗೌಡಗೆ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು. ಏಪ್ರಿಲ್​ 8ರ ತನಕ ಸೋನು ಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆದರೆ ಸೋನುಗೌಡ ಪರ ವಕೀಲರು ಜಾಮೀನು ಕೋರಿ ಕೋರ್ಟ್​ ಮೊರೆ ಹೋಗಿದ್ರು. 3 ದಿನಗಳ ಹಿಂದಷ್ಟೇ ಜಾಮೀನು ಮಂಜೂರು ಮಾಡಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು‌ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.