ಗಂಡ ಮನೆಯಲ್ಲಿ ಇಲ್ಲದಾಗ ಪರಪುಷನ ಜೊತೆ ಮಂಚ ಏರಿದ ಪತ್ನಿ, ಒಮ್ಮೆಲೇ ಮನೆಗೆ ಬಂದ ಪತಿರಾಯನಿಗೆ ಆ ಘಾತ

 | 
ರ

ಪ್ರೀತಿ ಮಾಯೆ ಹುಷಾರು ಎನ್ನುತ್ತಾರೆ ಹೌದು ಒಮ್ಮೆ ಪ್ರೀತಿಯಲ್ಲಿ ಬಿದ್ದರೆಟ್ ಜಗತ್ತೇ ಕಾಣುವುದಿಲ್ಲ. ಅಂತಹದರಲ್ಲಿ ಮದುವೆಯಾದ ನಂತರ ಪ್ರೀತಿ ಅಂದರೆ ಅನೈತಿಕ ಸಂಬಂಧ ಮೂಡಿ ಕೊನೆಯಲ್ಲಿ ಕೊಲೆಯಲ್ಲಿ ಅಂತ್ಯವಾಗುತ್ತದೆ. ಪ್ರಿಯಕರನ ಜತೆಗೆ ಇರುವಾಗ ವತಿಗೆ ಸಿಕ್ಕಿ ಬಿದ್ದಾಗ ನಡೆದ ಜಗಳದ ವೇಳೆ ಪ್ರಿಯಕರನ ಜತೆ ಸೇರಿ ವತಿಯ ತಲೆ ಮೇಲೆ ರುಬ್ಬುವ ಕಲ್ಲು ಎತ್ತಿ ಹಾಕಿ ಕೊಲೆ ಗೈದು ಬಳಿಕ ಮದ್ಯದ ಅಮಲಿನಲ್ಲಿ ಬಿದ್ದು ಮೃತಟ್ಟಿದ್ದಾರೆ ಎಂದು ನಾಟಕವಾಡಿದ್ದಳು ಪತ್ನಿ. 

ಆಂಧ್ರಪ್ರದೇಶದ ಅನಂತಪುರ ಮೂಲದ ವೆಂಕಟರಮಣ ನಾಯಕ 4 ವರ್ಷದ ಹಿಂದೆ ಸಂಬಂಧಿ ನಂದಿನಿ ಬಾಯಿ ಯನ್ನು ಮದುವೆಯಾಗಿದ್ದರು. ದಂಪತಿಗೆ 3 ಮತ್ತು 9 ತಿಂಗಳ ಎರಡು ಹೆಣ್ಣು ಮಕ್ಕಳಿವೆ. ಕಳೆದ 3 ವರ್ಷಗಳಿಂದ ದಂಪತಿ ಮಕ್ಕಳೊಂದಿಗೆ ಎಚ್‌ಎಸ್‌ಆರ್ ಲೇಔಟ್‌ನ 2ನೇ ಸೆಕ್ಟರ್‌ನ ಬನಶಂಕರಿ ಎಂಬ ವಸತಿ ಕಟ್ಟಡದಲ್ಲಿ ನೆಲೆಸಿದ್ದರು.

ವೆಂಕಟರಮಣ ಬೆಳಗ್ಗೆ ಇಂದಿರಾನಗರದ ಅಂಗಡಿಯೊಂದರಲ್ಲಿ ಸೇಲ್ಸ್ ಮ್ಯಾನ್ ಕೆಲಸ, ರಾತ್ರಿ ತಾನು ವಾಸವಿರುವ ಬನಶಂಕರಿ ಕಟ್ಟಡದಲ್ಲೇ ವಾಚ್‌ಮನ್ ಕೆಲಸ ಮಾಡಿಕೊಂಡಿದ್ದರು. ಮದುವೆಯ ಆರಂಭದಲ್ಲಿ ದಂಪತಿ ಅನೋನ್ಯವಾಗಿದ್ದರು. ಬಳಿಕ ಪತ್ನಿ ನಂದಿನಿ ಸಣ್ಣ ವಿಚಾರಗಳಿಗೆ ಜಗಳ ಮಾಡಿಕೊಂಡು ತವರಿಗೆ ಹೋಗುತ್ತಿದ್ದಳು. ಬಳಿಕ ಹಿರಿಯರ ಸಮ್ಮುಖದಲ್ಲಿ ಆಕೆಗೆ ಬುದ್ದಿ ಹೇಳಿ ಗಂಡನ ಜತೆಗೆ ಕಳುಹಿಸಿದರು.

ಇತ್ತೀಚೆಗೆ ನಂದಿನಿ ಮೊಬೈಲ್‌ನಲ್ಲಿ ವ್ಯಕ್ತಿ ಯೊಬ್ಬನ ಜತೆಗೆ ತುಂಬಾ ಮಾತನಾಡುತ್ತಿದ್ದಳು. ಈ ವಿಚಾರ ಪತಿ ವೆಂಕಟರಮಣನಿಗೆ ಗೊತ್ತಾಗಿ ಜಗಳ ಮಾಡಿದ್ದ. ಬಳಿಕ ಇಬ್ಬರ ಕುಟುಂಬದವರು ರಾಜಿ ಮಾಡಿಸಿ, ಮುಂದೆ ಹೀಗೆ ಮಾಡದಂತೆ ಬುದ್ದಿ ಹೇಳಿದ್ದರು. ಆದರೆ ಅದು ಅಲ್ಲಿಗೆ ಮುಗಿಯಲಿಲ್ಲ ಜನವರಿ 9 ರ ಸಂಜೆ ನಂದಿನಿ 9 ಗಂಟೆಯ  ಸುಮಾರಿಗೆ ತನ್ನ ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ಏಕಾಂತದಲ್ಲಿದ್ದರು. 

ಈ ವೇಳೆ ಏಕಾಏಕಿ ಮನೆಗೆ ಬಂದ ಪತಿ ವೆಂಕಟರಮಣನ ಕೈಗೆ ಇಬ್ಬರೂ ಸಿಕ್ಕಿಬಿದ್ದಿದ್ದು, ಜೋರು ಜಗಳವಾಗಿದೆ. ಮದ್ಯ ಸೇವಿಸಿ ಬಂದಿದ್ದ ವೆಂಕಟರಮಣನ ಮೇಲೆ ನಿತೀಶ್ ಕುಮಾರ್ ಹಲ್ಲೆ ಮಾಡಿದ್ದಾನೆ. ಕೆಳಗೆ ಬಿದ್ದಾಗ ರುಬ್ಬುವ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ವಾಚ್ ಮನ್ ಕೊಠಡಿ ಬಳಿಯ ಶೌಚಾಲಯದ ಸಮೀಪಕ್ಕೆ ಎಳೆದೊಯ್ದು ಇರಿಸಿದ್ದಾರೆ. ನಂತರ ನಿತೀಶ್ ಕುಮಾ‌ರ್ ಆಂಧ್ರಕ್ಕೆ ಹಾರಿದ್ದಾನೆ.

ಮದ್ಯದ ಅಮಲಿನಲ್ಲಿ ಶೌಚಾಲಯಕ್ಕೆ ತೆರಳುವಾಗ ಪತಿ ವೆಂಕಟರಮಣ ಮೃತಪಟ್ಟಿದ್ದಾನೆ ಎಂದು ನಂದಿನಿ ನಾಟಕವಾಡಲು ಸಂಚು ಮಾಡಿದ್ದಾಳೆ. ಬಳಿಕ 112 ಪೊಲೀಸ್‌ ವಾಣಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾಳೆ. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿ ದಾಗ, ಪತಿ ಮದ್ಯದ ಅಮಲಿನಲ್ಲಿ ಶೌಚಾಲಯಕ್ಕೆ ತೆರಳುವಾಗ ಜಾರಿ ಬಿದ್ದು ಮೃತಪಟ್ಟಿ ದ್ದಾರೆ ಎಂದು ಹೇಳಿದ್ದಾಳೆ. ವೆಂಕಟರಮಣನ ಮೈ ಹಾಗೂ ತಲೆಯ ಗಾಯ ಪರಿಶೀಲಿಸಿದಾಗ ಪೊಲೀಸರಿಗೆ ಅನುಮಾನ ಬಂದು ಪೊಲೀಸ್ ಭಾಷೆಯಲ್ಲಿ ವಿಚಾರಿಸಿದಾಗ ಸತ್ಯ ಹೊರಬಿದ್ದಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.