ಶ್ರೀ ರಾಮನ ಪ್ರಾಣ ಪ್ರತಿಷ್ಟಾಪನೆ ವೇಳೆ ಪೇಜಾವರ ಸ್ವಾಮೀಜಿ ಮುಖ ಮುಚ್ಚಿದ್ದೇಕೆ

 | 
ರಿ

ಕಳೆದ ಸೋಮವಾರ ಅಯೋಧ್ಯೆಯಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿದ್ದು ಇದರೊಂದಿಗೆ ನೂರಾರು ವರುಷಗಳ ತಪಸ್ಸಿನ ಫಲವಾಗಿ ನೆರವೇರಿದಂತಾಗಿದೆ. ಅಂದಿನಿಂದ ಅಯೋಧ್ಯೆಗೆ ಭಕ್ತರ ದಂಡೇ ಹರಿದು ಬರುತ್ತಿದೆ. ರಾಮಲಲ್ಲ ನ ಕಣ್ತುಂಬಿ ಕೊಳ್ಳಲು ಕಾಯುತ್ತಿದ್ದಾರೆ ಲಕ್ಷಾಂತರ ಮಂದಿ.

1949ರಲ್ಲಿ ಬಾಬರಿ ಮಸೀದಿಯಲ್ಲಿ ಸಿಕ್ಕ ಬಾಲ ರಾಮನ ಪುಟ್ಟ ವಿಗ್ರಹವನ್ನು ಇಷ್ಟೂ ವರ್ಷಗಳ ಕಾಲ ಟೆಂಟ್‌ನಲ್ಲಿ ಇರಿಸಿ ಪೂಜಿಸಲಾಗುತ್ತಿತ್ತು. ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ 51 ಇಂಚಿನ ಬಾಲ ರಾಮನ ಕೃಷ್ಣ ಶಿಲೆಯ ಮೂರ್ತಿಯ ಎದುರಲ್ಲೇ ಪುಟ್ಟ ಬಾಲ ರಾಮನ ಮೂರ್ತಿಯ ಚರ ಪ್ರಾಣ ಪ್ರತಿಷ್ಠಾಪನೆ ಮಾಡಲಾಗಿದೆ. ಆ ಪುಟ್ಟ ಮೂರ್ತಿಯನ್ನು ಉತ್ಸವ ಮೂರ್ತಿಯನ್ನಾಗಿ ಬಳಸಲಾಗುತ್ತದೆ. 

ಒಂದು ಹಂತದಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗರ್ಭಗುಡಿಯಲ್ಲಿ ಮುಖ ಮುಚ್ಚಿಕೊಂಡರು. ಅದೇಕೆ ಗೊತ್ತಾ? ರಾಮಲಲ್ಲಾನಿಗೆ ನೈವೇದ್ಯ ಮಾಡುವ ಸಂದರ್ಭದಲ್ಲಿ ದೇವರನ್ನು ನೋಡಬಾರದು ಎಂಬ ಶಾಸ್ತ್ರೀಯ ನಿಯಮ ಇದೆ. ಪ್ರಧಾನಿ ಮೋದಿಯವರು ರಾಮಲಲ್ಲಾನಿಗೆ ಭಕ್ಷ್ಯ ಮತ್ತು ಫ‌ಲಗಳನ್ನು ನೈವೇದ್ಯ ಮಾಡುತ್ತಿದ್ದರು.

ಈ ವೇಳೆ ಮೋದಿ ಸಮೀಪವೇ ಇದ್ದ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಮ್ಮ ಅಂಗವಸ್ತ್ರದಿಂದ ಮುಖ ಮುಚ್ಚಿಕೊಂಡರು. ಜತೆಗೆ ವಿಧಿವಿಧಾನಗಳು ನಡೆಯುತ್ತಿದ್ದ ವೇಳೆ ಅವರು, ಮಂತ್ರೋಚ್ಛಾರಣೆ ಮಾಡುತ್ತಿದ್ದರು. ಜತೆಗೆ, ಕೆಲ ಸಂದರ್ಭದಲ್ಲಿ ಪ್ರಧಾನಿಗೆ ಸಲಹೆ ಸೂಚನೆಗಳನ್ನು ನೀಡುತ್ತಿದ್ದದ್ದೂ ಕಂಡುಬಂತು.

( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.