ನರೇಂದ್ರ ಮೋದಿಜಿಗೆ ಕನ್ನಡಿಗರ ಮೇಲೆ ಯಾಕಿಷ್ಟು ಪ್ರೀತಿ, ರಾಮ ಮಂದಿರಕ್ಕೆ ಕನ್ನಡಿಗನೇ ಬೇಕೆಂದ ಪ್ರಧಾನಿ

 | 
Hh
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲು ಕರ್ನಾಟಕದ ಶಿಲ್ಪಿ ಮೈಸೂರಿನ ಅರುಣ್‌ ಯೋಗಿರಾಜ್‌ ಕೆತ್ತಿದ ಶ್ರೀರಾಮನ ಮೂರ್ತಿ ಆಯ್ಕೆಯಾಗಿದೆ. ಐತಿಹಾಸಿಕ ರಾಮ ಮಂದಿರದಲ್ಲಿ ಕರ್ನಾಟಕದ ಶಿಲ್ಪಿ ಕೆತ್ತಿರುವ ರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗುತ್ತಿರುವುದು ರಾಜ್ಯಕ್ಕೆ ಹೆಮ್ಮೆಯ ವಿಚಾರವಾಗಿದೆ.
ಹೊಸ ವರ್ಷದ ದಿನವೇ ಅಯೋಧ್ಯೆ ರಾಮಮಂದಿರ ಸಮಿತಿಯು ಖುದ್ದು ಅರುಣ್‌ ಯೋಗಿರಾಜ್‌ ಅವರಿಗೆ ಕರೆ ಮಾಡಿ ನೀವು ರೂಪಿಸಿದ ವಿಗ್ರಹವನ್ನೇ ಆಯ್ಕೆ ಮಾಡಲಾಗಿದೆ ಎನ್ನುವ ಸಂದೇಶವನ್ನು ನೀಡಿದ್ದಾರೆ ಎನ್ನಲಾಗಿದೆ. ರಾಮ ಲಲ್ಲಾ ಮೂರ್ತಿಯನ್ನು ಹೆಚ್.ಡಿ.ಕೋಟೆ ತಾಲೂಕಿನ ಹಾರೋಹಳ್ಳಿ ಗ್ರಾಮದ ಕಲ್ಲಿನಿಂದ ಅರುಣ್‌ ಯೋಗಿರಾಜ್ ಕೆತ್ತನೆ ಮಾಡಿದ್ದರು.
ಅಯೋಧ್ಯೆಯಲ್ಲಿ ಇದೇ ಜನವರಿ 22ರಂದು ಭವ್ಯ ರಾಮಮಂದಿರ ಲೋಕಾರ್ಪಣೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷವೇ ರಾಮನ ವಿಗ್ರಹ ತಯಾರಿಸಲು ದೇಶದ ಹಲವಾರು ಕಲಾವಿದರನ್ನು ಆಯ್ಕೆ ಮಾಡಲಾಗಿತ್ತು. ಇವರು ಕಳುಹಿಸಿದ ಮಾದರಿಗಳನ್ನು ಗುರುತಿಸಿ ಕೊನೆಗೆ ಕರ್ನಾಟಕದ ಇಬ್ಬರು ಹಾಗೂ ರಾಜಸ್ಥಾನದ ಒಬ್ಬರು ಕಲಾವಿದರ ಹೆಸರು ಅಂತಿಮಗೊಳಿಸಲಾಗಿತ್ತು.
ಇದರಲ್ಲಿ ಅರುಣ್‌ ಯೋಗಿರಾಜ್‌, ಜಿ.ಎಸ್.‌ಭಟ್‌ ಕರ್ನಾಟಕದವರಾದರೇ ಆಗಿದ್ದರು. ಸಂಜಯ್‌ ಪಾಂಡೆ ಎನ್ನುವ ಕಲಾವಿದರು ರಾಜಸ್ಥಾನದವರು. ಈ ಮೂವರು ತಾವು ಕೆತ್ತಿದ್ದ ಮೂರ್ತಿಗಳನ್ನು ತೆಗೆದುಕೊಂಡು ಹೋಗಿದ್ದರು. ಇದರಲ್ಲಿ ಅರುಣ್‌ ಯೋಗಿರಾಜ್‌ ವಿಗ್ರಹವನ್ನು ಅಂತಿಮಗೊಳಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅರುಣ್‌ ಯೋಗಿರಾಜ್ ಅವರು ಕೆತ್ತಿರುವ ಶ್ರೀರಾಮ ಮೂರ್ತಿ ಆಯ್ಕೆಯಾಗುತ್ತಿದ್ದಂತೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ವಿಪಕ್ಷ ನಾಯಕ ಆರ್‌.ಅಶೋಕ್‌ ಶುಭಕೋರಿದ್ದು. ಕರ್ನಾಟಕದ ಹೆಮ್ಮೆಯ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ಅವರ ಕೆತ್ತನೆಯ ಶ್ರೀರಾಮನ ಮೂರ್ತಿ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದ್ದು, ಶ್ರೀರಾಮನ ವಿಗ್ರಹ ಕೆತ್ತನೆಗೆ ಬಳಸಲಾದ ಕಲ್ಲು ಸಹ ನಮ್ಮ ಕರ್ನಾಟಕದ ಎಚ್.ಡಿ.ಕೋಟೆಯದ್ದು ಎಂಬುದು ಮತ್ತೊಂದು ವಿಶೇಷ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.