ಪ್ರತಾಪ್ ಸಿಂಹ ಗೆ ಟಿಕೆಟ್ ಮಿಸ್ ಆಗಿದ್ಯಾಕೆ, ರಹಸ್ಯ ಬಿಚ್ಚಿಟ್ಟ ಈಶ್ವರಪ್ಪ

 | 
ಹಾಹಾ
ಪುತ್ರನಿಗೆ ಟಿಕೆಟ್ ತಪ್ಪಿದ ಬೆನ್ನಲ್ಲೇ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಮಲ್ಲೇಶ್ವರ ನಗರದ ಜಯಲಕ್ಷ್ಮೀ ನಿವಾಸದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದರು. ಮಾನ್ಯ ಯಡಿಯೂರಪ್ಪ ಅವರ ಮನೆಗೆ ಹೋದಾಗ ಕಾಂತೇಶ್​ಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ಕೊಡಿಸುವ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಂತೇಶ್ ಆ ಭಾಗದಲ್ಲಿ ಓಡಾಡಿದ್ದ, ಜನರ ವಿಶ್ವಾಸಗಳಿಸಿದ್ದ. 
ಈಗ ಯಡಿಯೂರಪ್ಪ ತಮ್ಮ ಮಾತನ್ನು ಉಳಿಸಿಕೊಳ್ಳಲಿಲ್ಲ ಎಂದು ಬೇಸರ ಹೊರ ಹಾಕಿದರು. ಇದೀಗ ನನ್ನ ಬೆಂಬಲಿಗರು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ನಾನು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದರು.ಯಡಿಯೂರಪ್ಪ ಹಠಕ್ಕೆ ಬಿದ್ದು ಶೋಭಾ ಕರಂದ್ಲಾಜೆ ಹಾಗೂ ಬಸವರಾಜ್ ಬೊಮ್ಮಾಯಿ ಅವರಿಗೆ ಟಿಕೆಟ್ ಕೊಡಿಸಿದ್ದಾರೆ. ನನ್ನ ಮಗನಿಗೆ ಟಿಕೆಟ್ ಕೊಡಿಸಲು ಆಗಲಿಲ್ಲವೇ ಎಂದು ಈಶ್ವರಪ್ಪ ಪ್ರಶ್ನೆ ಮಾಡಿದ್ದಾರೆ.
ತಾಯಿ‌ ಸ್ಥಾನದಲ್ಲಿರುವ ಪಕ್ಷದ ಕತ್ತು ಹಿಸುಕುತ್ತಿದ್ದಾರೆ. ತಾಯಿ ಸ್ಥಾನದಲ್ಲಿರುವ ಪಕ್ಷವನ್ನು ಉಳಿಸುವಂತೆ ಕಾರ್ಯಕರ್ತರು ನನಗೆ ಒತ್ತಾಯಿಸುತ್ತಿದ್ದಾರೆ. ಕೇವಲ ಕಾಂತೇಶ್​ಗೆ ಮಾತ್ರವಲ್ಲ ಪ್ರತಾಪ್ ಸಿಂಹ, ಸದಾನಂದ ಗೌಡ, ಸಿ.ಟಿ.ರವಿ ಸೇರಿದಂತೆ ಅನೇಕರಿಗೆ ಅನ್ಯಾಯವಾಗಿದೆ ಎಂದು ಗುಡುಗಿದ್ದಾರೆ.
ಹಿಂದುತ್ವದ ವಿಚಾರದಲ್ಲಿ ಮಾತನಾಡುತ್ತಿದ್ದವರನ್ನು ಮೂಲೆಗುಂಪು ಮಾಡಲಾಗಿದೆ. ನಾನು ಈಗಲೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ನಾನು ಅಸಮಾಧಾನಗೊಂಡವರ ಧನಿ ಆಗಬೇಕಿದೆ. ನಾನು ಅನ್ಯಾಯಕ್ಕೊಳಗಾಗಿರುವವರ ದನಿಯಾಗಬೇಕಿದೆ ಎಂದು ಹೇಳಿದ್ದಾರೆ.ಪ್ರಾಣ ಹೋದರೂ ನಾನು ಮೋದಿಯ ಪರವಾಗಿರುತ್ತೇನೆ. ಒಂದು ಕುಟುಂಬದ ಕೈಯೊಳಗೆ ಪಕ್ಷ ಸಿಕ್ಕಿ ಹಾಕಿಕೊಂಡಿದೆ. ಹಾಗಾಗಿ ಪಕ್ಷವನ್ನು ಉಳಿಸಬೇಕಿದೆ ಎಂದು ಯಡಿಯೂರಪ್ಪ ಗೆ ಟಾಂಗ್ ನೀಡಿದ್ದಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.