2000 ಯುವತಿಯರ ಜೊತೆ ಆ ಟ; ಕೊನೆಗೂ ಲೈವ್ ಬಂದು ಎಲ್ಲವೂ ಹೇಳಿದ ಪ್ರಜ್ವಲ್

 | 
Hs

ಹಾಸನ ಅಶ್ಲೀಲ ವಿಡಿಯೋ ಪೆನ್​​ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ ವಿದೇಶದಲ್ಲೊ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಬರೋಬ್ಬರಿ ಒಂದು ತಿಂಗಳ ಬಳಿಕ ಪ್ರತ್ಯಕ್ಷರಾಗಿದ್ದಾರೆ.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಇದೇ ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್​​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ವಿಡಿಯೋದಲ್ಲಿ ತಂದೆ- ತಾಯಿ, ತಾತನ ಕ್ಷಮೆಯಾಚಿಸಿದ್ದಾರೆ.

 ಅಲ್ಲದೇ ಜನರು, ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆ ಕೋರಿದ್ದಾರೆ. ಇನ್ನು ವಿದೇಶಕ್ಕೆ ತೆರಳಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು ಎಂದು ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದಾರೆ.ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು. ವಿದೇಶಕ್ಕೆ ಹೋದ ಮೂರ್ನಾಲ್ಕು ದಿನದ ಬಳಿಕ ಪ್ರಕರಣದ ಬಗ್ಗೆ ಮಾಹಿತಿ ಗೊತ್ತಾಗಿದೆ. ಏಪ್ರಿಲ್ 26ರಂದು ಚುನಾವಣೆ ನಡೆಯಿತು. ಆಗ ಕೇಸ್​ ದಾಖಲಾಗಿರಲಿಲ್ಲ. 

ಎಸ್​​ಐಟಿ ಕೂಡ ರಚನೆ ಆಗಿರಲಿಲ್ಲ. ಆ ನಂತರ ಎಸ್​​ಐಟಿ ನೋಟಿಸ್​ ನೀಡಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಆದ್ರೆ, ನನ್ನ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು-ಪ್ರಜ್ವಲ್ ರೇವಣ್ಣ ಎಂದು ವಿದೇಶದಿಂದ ವಿಡಿಯೋ ರಿಲೀಸ್ ಮಾಡಿದ್ದಾರೆ.
ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.