ಸೂಪರ್ ಸ್ಟಾರ್ ದರ್ಶನ್ ವಿರುದ್ಧ ಹೆಚ್ಚಾಯಿತು ಮಹಿಳೆಯರ ಕೂಗು, ದಾಸನ ದಾನ ಧರ್ಮ ಮರೆತ ಪ್ರಜೆಗಳು

 | 
ಪರ ತದಹಗ

ಸ್ಯಾಂಡಲ್​ವುಡ್​ ನಟ ದರ್ಶನ್ ಅವರ ಕೊರಳಿಗೆ ಹಲವು ವಿವಾದಗಳು ಸುತ್ತಿಕೊಳ್ಳುತ್ತಿವೆ. ವೇದಿಕೆ ಮೇಲೆ ಅವರು ಆಡಿದ ಮಾತುಗಳಿಗೆ ಅನೇಕರಿಂದ ಖಂಡನೆ ವ್ಯಕ್ತವಾಗುತ್ತಿದೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ  ಅವರಿಗೆ ತಗಡು ಎಂಬ ಪದ ಬಳಕೆ ಮಾಡಿದ್ದನ್ನು ರಾಜ್ಯ ಒಕ್ಕಲಿಗರ ಸಂಘ ಖಂಡಿಸಿದೆ. ಅದೇ ರೀತಿ, ಬೆಳ್ಳಿ ಪರ್ವ ಡಿ-25 ಸಮಾರಂಭದಲ್ಲಿ ದರ್ಶನ್​ ಅವರು ಮಹಿಳೆಯರ ಬಗ್ಗೆ ಆಡಿದ ಮಾತುಗಳಿಗೆ ಮಹಿಳೆಯರು  ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ .

ದರ್ಶನ್​ ಅವರ ಹೇಳಿಕೆಯನ್ನು ಖಂಡಿಸಿ, ಮಹಿಳಾ ಆಯೋಗದ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ದರ್ಶನ್​ ವಿರುದ್ಧ ಮಹಿಳಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದು ಮಹಿಳೆಯರು ಪತ್ರದಲ್ಲಿ ತಿಳಿಸಿದ್ದಾರೆ.ಯುವ ಜನರಿಗೆ ಮಾದರಿ ಆಗಬೇಕಿದ್ದ ಒಬ್ಬ ನಾಯಕ ನಟ ಅಸಹಜ ಹೇಳಿಕೆಗಳನ್ನು ಕೊಡುತ್ತಿರುವುದು. 

25ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕ ಸಭೆಯಲ್ಲಿ ಹೆಣ್ಣು ಮಕ್ಕಳ ಬಗ್ಗೆ ಕೀಳು ಭಾವನೆಯಿಂದ ಒಬ್ಬಳು ಹೋಗುತ್ತಾಳೆ ಒಬ್ಬಳು ಬರುತ್ತಾಳೆ ಅವಳ ಅಜ್ಜಿನಾ ಬಡಿಯ ಎಂದು ಉಡಾಫೆಯಾಗಿ ಮಾತನಾಡಿರುತ್ತಾರೆ. ಈ ಸಭೆಯಲ್ಲಿ ಆದಿಚುಂಚನಗಿರಿ ಗುರುಗಳು, ಸಂಸದೆ ಸುಮಲತಾ, ಹಲವಾರು ಗಣ್ಯಾತಿಗಣ್ಯರು, ಸಾವಿರಾರು ಅಭಿಮಾನಿಗಳು ಉಪಸ್ಥಿತರಿದ್ದರು ಎಂದು ಪತ್ರದಲ್ಲಿ ಬರೆಯಲಾಗಿದೆ.

ಸಮಾಜಕ್ಕೆ ಮಾದರಿ ಆಗಬೇಕಾದ ನಟನೊಬ್ಬ ಸಾರ್ವಜನಿಕವಾಗಿ ಹೀಗೆ ಮಾತನಾಡುವುದು ಅಕ್ಷಮ್ಯ ಅಪರಾಧವಾಗಿದ್ದು, ವಿಚಾರಣೆ ನಡೆಸಿ, ಆತ ಉಪಯೋಗಿಸಿರುವ ಪದಗಳು ಯಾವ ಭಾವನೆಯಿಂದ ಹೇಳಿದ್ದಾರೆಂದು ವಿವರಣೆ ಕೇಳಬೇಕಾಗಿ ವಿನಂತಿ. ಈ ಹಿಂದೆಯೂ ಈ ನಟ ಹೆಂಡತಿಗೆ ಸಿಗರೇಟ್​ನಿಂದ ಸುಟ್ಟು ಮಾನಸಿಕವಾಗಿ ಕಿರುಕುಳ ಕೊಟ್ಟು ಜೈಲು ಪಾಲಾಗಿದ್ದು ಇತಿಹಾಸ. 

ಇನ್ನೊಂದು ಸಂದರ್ಭದಲ್ಲಿ ಅದೃಷ್ಟ ದೇವತೆ ನಿಮ್ಮ ಮನೆಗೆ ಬಂದರೆ ಬಟ್ಟೆ ಬಿಚ್ಚಿ ರೂಮಿನಲ್ಲಿ ಕೂಡಿಹಾಕಿ ಎಂಬ ಹೇಳಿಕೆ ನೀಡಿ ಹೆಣ್ಣು ಮಕ್ಕಳು ಮುಜುಗರಗೊಳ್ಳುವಂತೆ ಮಾಡಿರುತ್ತಾನೆ. ಮಾದರಿ ನಾಯಕ ಯುವ ಜನತೆಗೆ ನೀಡುತ್ತಿರುವ ಸಂದೇಶ ಏನು ಎನ್ನುವುದರ ಸ್ಪಷ್ಟನೆ ನೀಡಿ ಕ್ಷಮೆ ಕೇಳಬೇಕು ಎಂದು ಮಹಿಳೆಯರು ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.