ಕೊರೋನಾ ವೇಳೆ ಮಾಸ್ಕ್ ವಿಚಾರದಲ್ಲಿ 40ಸಾವಿರ ಕೋಟಿ ರೂ ಲೂಟಿ ಮಾಡಿದ ಯಡಿಯೂರಪ್ಪ, ಯತ್ನಾಳ್ ಆ.ರೋಪ

 | 
Js

ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಿಜೆಪಿಯ ಫೈರ್ ಬ್ರಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ನನ್ನನ್ನು ಪಕ್ಷದಿಂದ ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ರಿಲೀಸ್ ಮಾಡುತ್ತೇನೆ ಎಂದು ಮಂಗಳವಾರ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸತ್ಯ ಹೇಳಿದರೆ ಎಲ್ಲರಿಗೂ ಭಯವಾಗುತ್ತದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂಪಾಯಿಯ ಅವ್ಯವಹಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.ನಾನು ಪ್ರಧಾನಿ ಮೋದಿ ಅವರಿಗಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ನನಗೆ ನೋಟಿಸ್ ಕೊಟ್ಟು ಪಕ್ಷದಿಂದ ಉಚ್ಚಾಟಿಸಿ ನೋಡಲಿ. 

ಆಗ ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ ಎಂದು ಯತ್ನಾಳ್ ಸವಾಲು ಹಾಕಿದ್ದಾರೆ. 45 ರೂಪಾಯಿ ಮಾಸ್ಕ್ ಗೆ 485 ರೂಪಾಯಿ ಬಿಲ್ ಹಾಕಿದ್ದಾರೆ. ಬೆಡ್‌ಗಳಿಗೆ ಒಂದು ದಿನಕ್ಕೆ 10 ಸಾವಿರ ರೂಪಾಯಿ ಬಾಡಿಗೆ ನೀಡಿದ್ದಾರೆ. ಖರೀದಿ ಮಾಡಿದ್ರೆ ಒಂದು ದಿನದ ಬಿಲ್ ನಲ್ಲಿ ಎರಡು ಬೆಡ್ ಬರ್ತಿದ್ದವು. ಮಾಸ್ಕ್, ಬೆಡ್‌ಗಳಲ್ಲೂ ಭ್ರಷ್ಟಾಚಾರ ನಡೆದಿದೆ ಎಂದಿದ್ದಾರೆ. ನಮ್ಮ ಸರ್ಕಾರ ಇದ್ರೆ ಏನು ಆಯ್ತು? ಕಳ್ಳರು ಕಳ್ಳರೇ ಅಲ್ವಾ? ನನಗೆ ಆಸ್ಪತ್ರೆಯಲ್ಲಿ 5 ಲಕ್ಷ ರೂಪಾಯಿ ಬಿಲ್ ಹಾಕಿದರು. 

ಇನ್ನು ಬಡವರು ಏನು ಮಾಡಬೇಕು. ಕೊರೋನಾ ವೇಳೆ ಕೋಟಿ ಕೋಟಿ ಲೂಟಿ ಆಗಿದೆ ಎಂದಿದ್ದಾರೆ. ಜನವರಿ 5ಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಕೇಸ್ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ಅವರ ನಂತರ ಅಪ್ಪಾಜಿಯದ್ದೇ ಹೊರ ತೆಗೆಯುತ್ತೇನೆ ಎಂದು ಹೇಳುವ ಮೂಕಲಕ ಪರೋಕ್ಷವಾಗಿ ಮಾಜಿ ಸಿಎಂ ಬಿಎಸ್  ಯಡಿಯೂರಪ್ಪ ವಿರುದ್ಧ ತನಿಖೆಗೆ ಒತ್ತಾಯಿಸುವುದಾಗಿ ಎಂದು ಹೇಳಿದ್ದಾರೆ.ನನ್ನ ಉಚ್ಚಾಟನೆ ಮಾಡಿದ ಮರುದಿನವೇ ದಾಖಲೆ ಬಿಡುಗಡೆ ಮಾಡುವೆ. 

ಉಚ್ಛಾಟನೆ ಮಾಡಲು, ನೋಟೀಸ್ ನೀಡಲಿ ಅವರ ಬಗ್ಗೆ ಎಲ್ಲವನ್ನೂ ಹೇಳುತ್ತೇನೆ. ಉಚ್ಚಾಟನೆ ಮಾಡಿದ ಮರುದಿನ ಎಲ್ಲಾ ಹೇಳ್ತೀನಿ, ದಾಖಲೆ ಬಿಡುಗಡೆ ಮಾಡುವೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.