ಇನ್ಫೊಸಿಸ್ ಮೂತಿ೯ಗಳ ವಿರುದ್ಧ ರೊಚ್ಚಿಗೆದ್ದ ಯುವತಿ, ಕಾರಣ ಕೇಳಿ ಶಾಕ್ ಆದ ಜನರು

 | 
ಲಪೀ

 ದೇಶದ ಕೆಲಸದ ಸಂಸ್ಕೃತಿಯನ್ನು ಮೇಲ್ದರ್ಜೆಗೇರಿಸಲು ಹಾಗೂ ಜಾಗತಿಕ ಮಟ್ಟದಲ್ಲಿನ ಪರಿಣಾಮಕಾರಿಯಾಗಿ ಸ್ಪರ್ಧಿಸಲು ಭಾರತದ ಯುವಜನರು ವಾರಕ್ಕೆ 70 ಗಂಟೆ ಕೆಲಸ ಮಾಡಲು ಸಿದ್ಧರಾಗಬೇಕು ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್‌ ಆರ್ ನಾರಾಯಣ ಮೂರ್ತಿ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ವಾರಕ್ಕೆ 70 ಗಂಟೆ ದುಡಿಮೆಗೆ ಮೀಸಲಿಟ್ಟರೆ ಉತ್ಪಾದಕತೆಗಿಂತ ಕೆಲಸಗಾರರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಕೆಲಸದ ಮೇಲೆ ಅತಿಯಾದ ಗಮನವು ದೈಹಿಕ ಮತ್ತು ಮಾನಸಿಕ ಆರೋಗ್ಯ ಸೇರಿದಂತೆ ಒಟ್ಟಾರೆ ಯೋಗಕ್ಷೇಮದಲ್ಲಿ ಕ್ಷೀಣತೆಗೆ ಕಾರಣವಾಗಬಹುದು ಎಂದು ಹಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಕುರಿತಾಗಿ ಹೇಳಿಕೆ ನೀಡಿರುವ ಹೋರಾಟಗಾರ್ತಿ ಸಂಧ್ಯಾ ಪವಿತ್ರಾ ನಾಗರಾಜ್ ಅವರು ಮಹಿಳೆಯರನ್ನು ಕೆಲಸದ ಸ್ಥಳದಿಂದ ಹೊರಹಾಕುವ ಪ್ರಯತ್ನವಲ್ಲದೆ ಮತ್ತೇನಿಲ್ಲ. 70 ಗಂಟೆ ಕೆಲಸ ಮಾಡುವುದರಿಂದ ಮಹಿಳೆಯ ಮನೆಗೆಲಸ, ಆರೈಕೆ ಮತ್ತು ಮಕ್ಕಳ ಪಾಲನೆಯ ಮೇಲೆ ಪರಿಣಾಮ ಬೀರುತ್ತದೆ. ಪುರುಷರು ಆಕೆಯ ಕೆಲಸವನ್ನು ಹಂಚಿಕೊಳ್ಳುವುದಿಲ್ಲ. ಆದ ಕಾರಣ ಆಕೆ ಕೆಲಸದಿಂದ ಹೊರಗುಳಿಯುವುದನ್ನು ಬಿಟ್ಟು ಬೇರೆ ಆಯ್ಕೆ ಇರುವುದಿಲ್ಲ ಎಂದು  ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ ನೀವು ಉದ್ದಾರ ಆಗಲು ಬೇರೆಯವರನ್ನು ಬಲಿ ಹಾಕ್ತೀರಾ ಎಂದೂ ಕೂಡ ತರಾಟೆಗೆ ತೆಗೆದುಕೊಂಡಿದ್ದಾರೆ.
ಯುವ ಜನರು ಕುಟುಂಬ, ತಮಗಾಗಿ ಸಮಯ ನೀಡಲಾಗದೆ ಕೆಲಸದ ಹೊರೆಯಿಂದಾಗಿ ಈಗಾಗಲೇ ಚಿಕ್ಕ ವಯಸ್ಸಿನಲ್ಲಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹೀಗಿರುವಾಗ ದಿನಕ್ಕೆ 12 ಗಂಟೆಗಳ ಸರಾಸರಿಯಲ್ಲಿ ದುಡಿಯಬೇಕು ಎಂದು ಕರೆ ನೀಡುವುದು ದೇಶದ ಆರೋಗ್ಯ ವ್ಯವಸ್ಥೆಯೇ ಕುಸಿದುಬೀಳಲು ಕಾರಣವಾಗಬಹುದು ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಕಾರ್ಪೊರೇಟ್ ಕಂಪೆನಿಗಳು ದೇಶದ ಪ್ರಗತಿ ನೆಪವೊಡ್ಡಿ ತಮ್ಮ ಲಾಭಕ್ಕಾಗಿ ಬೇಳೆ ಬೇಯಿಸಿಕೊಳ್ಳುವ ಹುನ್ನಾರ ಇದು ಎಂದು  ಕೆಲವರು ಕಿಡಿಕಾರಿದ್ದಾರೆ.

( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.